ಡಾ.ಸಿದ್ದಯ್ಯ ಪುರಾಣಿಕ
ವಾಚಿಕೆ-2. ಡಾ.ಸಿದ್ದಯ್ಯ ಪುರಾಣಿಕ್
ಕಲ್ಯಾಣ ಕರ್ನಾಟಕದ ಸೃಜನಶೀಲ ಸಾಹಿತಿಗಳು ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿ, ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಈ ಸಾಹಿತಿಗಳ ಕೃತಿಗಳು ಕನ್ನಡ ಓದುಗರಿಗೆ ಉಪಲಬ್ಧವಿರುವುದಿಲ್ಲ. ಈ ಲೇಖಕರು ರಚಿಸಿದ ಎಲ್ಲಾ ಸಾಹಿತ್ಯದ ಮೊತ್ತ ಸಾವಿರ ಪುಟಗಳಷ್ಟಾಗುತ್ತದೆ. ಅಷ್ಟನ್ನೂ ಮುದ್ರಿಸುವುದು ಕಷ್ಟಕರ. ಈ ದಿಸೆಯಲ್ಲಿ ನಮ್ಮ ಪ್ರಕಾಶನದಿಂದ ಸಾಹಿತಿಗಳ ವಾಚಿಕೆಗಳನ್ನು ಹೊರತಂದು, ಅವರ ಸಾಹಿತ್ಯದ ಸ್ವಾದವನ್ನು ಕನ್ನಡಿಗರಿಗೆ ಉಣಬಡಿಸಿ ಕನ್ನಡಿಗರ ಹೃನ್ಮನಗಳನ್ನು ಅರಳಿಸುವಂತಾಗಬೇಕೆನ್ನುವುದು ಕಲಬುರಗಿಯ ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದ ಸದಿಚ್ಛೆಯಾಗಿದೆ. ಸುವರ್ಣ ಕರ್ನಾಟಕ ನಾಮಕರಣ ಸಂಭ್ರಮಾಚರಣೆ ಸಂದರ್ಭದಲ್ಲಿ, ಕನ್ನಡ ಸಾಹಿತ್ಯದಲ್ಲಿ ಅಹರ್ನಿಶಿ ಸೇವೆಗೈದ ಹಲವು ಹಿರಿಯ ಮತ್ತು ಕಿರಿಯ ಸಾಹಿತಿಗಳ ವಾಚಿಕೆಗಳನ್ನು ಹೊರತಂದು ಕನ್ನಡ ಓದುಗರ ಮಡಿಲಿಗೆ ಅರ್ಪಿಸುವ ಸದಿಚ್ಚೆಯಾಗಿದೆ.
ಈ ಸದಿಚ್ಛೆ ನೆರವೇರುವಲ್ಲಿ ಡಾ. ಶರಣಬಸಪ್ಪ ವಡ್ಡನಕೇರಿ ಯವರು ಸಿದ್ದಯ್ಯ ಪುರಾಣಿಕರವರ ಕುರಿತ ಸಮಗ್ರ ಸಾಹಿತ್ಯ ವಾಚಿಕೆ ರೂಪದಲ್ಲಿ ಸಂಪಾದಿಸಿದ್ದಾರೆ.ಸಿದ್ದಯ್ಯ ಪುರಾಣಿಕರಿಂದ ರಚಿತವಾದ ಸಾಹಿತ್ಯ ಈ ವಾಚಿಕೆಯಲ್ಲಿ ಅಡಕವಾಗಿದೆ. ಅವರ ಕೃತಿಗಳಿಗೆ ಕೇಂದ್ರ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿಗಳ ಪ್ರಶಸ್ತಿ ಕೂಡಾ ಲಭಿಸಿದಲ್ಲದೆ ಕಲ್ಬುರ್ಗಿಯಲ್ಲಿ ನಡೆದ ೫೪ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಜೊತೆಗೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ ಪದವಿಗೆ ಭಾಜನರಾದ ಸಿದ್ದಯ್ಯ ಪುರಾಣಿಕರ ಅವರ ಒಟ್ಟು ಸಾಹಿತ್ಯದಸತ್ವವನ್ನು ಕನ್ನಡ ಓದುಗರಿಗೆ ಈ ವಾಚಿಕೆ ಉಣಬಡಿಸುತ್ತದೆ.
ಸಿದ್ಧಯ್ಯ ಪುರಾಣಿಕರು ವೃತ್ತಿಯಲ್ಲಿ ಐ.ಎ.ಎಸ್. ಅಧಿಕಾರಿಗಳಾಗಿದ್ದರೂ ಪ್ರವೃತ್ತಿಯಲ್ಲಿ ಸಾಹಿತಿಗಳು. ಅವರ ಸಾಹಿತ್ಯರಾಶಿ ವಿಪುಲವಾಗಿದೆ. ಹಾಗೂ ವೈವಿಧ್ಯಮಯವೂ ಆಗಿದೆ. ಆತ್ಮಾರ್ಪಣೆ, ಭಾರತವೀರ, ರಜತ ರೇಖೆ, ಭಿನ್ನನೂಪುರು ಅಲ್ಲದೆ ಕೆಲವು ಗೇಹ ನಾಟಕಗಳು ಎಂಬ ನಾಟಕಗಳನ್ನವರು ರಚಿಸಿದ್ದಾರೆ. ಭಾರತವೀರ ನಾಟಕ ಚೀನಿಯರ ದಾಳಿಯ ಸಂದರ್ಭದಲ್ಲಿ ಹುಟ್ಟಿದ್ದು. ತ್ರಿಭುವನ ಮಲ್ಲ ಎಂಬ ಕಾದಂಬರಿಯೂ ಇವರದೆ. ವಿಕಾಸವಾಣಿ ಎಂಬುದು ವಯಸ್ಕರಿಗಾಗಿ ಬರೆದ ಕೃತಿ. ಮಕ್ಕಳಿಗಾಗಿ ತುಪ್ಪಾರೊಟ್ಟಿ ಗೇಗೇಗೇ, ಗಿಲ್ ಗಿಲ್ ಗಿಲಗಚ್ಚಿ, ತಿರುಗೆಲೇ ತಿರುಗೆಲೆ ತಿರುಗುಯ್ಯಾಲೆ, ನ್ಯಾಯ ನಿರ್ಣಯ, ಮಕ್ಕಳ ಲೋಕ ಸಂಚಾರ, ಬಣ್ಣ ಬಣ್ಣದ ಓಕುಳಿ ಎಂಬ ಆರು ಕೃತಿಗಳನ್ನು ರಚಿಸಿದ್ದಾರೆ. ಬಸವಣ್ಣನವರ ಜೀವನ ಹಾಗೂ ಸಂದೇಶ, ಮಹಾದೇವಿ, ಹರ್ಡೇಕರ್ ಮಂಜಪ್ಪನವರು, ಸಿದ್ದರಾಮ, ಮಿರ್ಜಾಗಾಲಿಬ್, ಅಲ್ಲಮ ಪ್ರಭು ಎಂಬ ಜೀವನ ಚರಿತ್ರೆಗಳನ್ನು ರಚಿಸಿದ್ದಾರೆ. ಕಥಾ ಮಂಜರಿ ಹಾಗೂ ತುಷಾರ ಹಾರ ಎಂಬ ಎರಡುಕಥಾ ಸಂಕಲನಗಳನ್ನೂ ಬರೆದಿದ್ದಾರೆ. ಹದಿಮೂರಕ್ಕೂ ಹೆಚ್ಚು ಕೃತಿಗಳ ಸಂಪಾದನೆ ಕಾರ್ಯವನ್ನು ಮಾಡಿದ್ದಾರೆ. ಇವುಗಳಲ್ಲಿ ಕೆಲವು ಅನ್ಯಮಹನೀಯರೊಡನೆ ಸಂಪಾದಿಸಿದವುಗಳಾಗಿವೆ. ಹಲವೊಂದು ಅನುವಾದಗಳನ್ನೂ ಮಾಡಿದ್ದಾರೆ.
ಜಲಪಾತ, ಕರುಣಾ ಶ್ರಾವಣ, ಮಾನಸ ಸರೋವರ, ಮೊದಲು ಮಾನವನಾಗುಕಥಾ ಸಂಕಲನಗಳನ್ನೂ ಬರೆದಿದ್ದಾರೆ. ಹದಿಮೂರಕ್ಕೂ ಹೆಚ್ಚು ಕೃತಿಗಳ ಸಂಪಾದನೆ ಕಾರ್ಯವನ್ನು ಮಾಡಿದ್ದಾರೆ. ಇವುಗಳಲ್ಲಿ ಕೆಲವು ಅನ್ಯಮಹನೀಯರೊಡನೆ ಸಂಪಾದಿಸಿದವುಗಳಾಗಿವೆ. ಹಲವೊಂದು ಅನುವಾದಗಳನ್ನೂ ಮಾಡಿದ್ದಾರೆ.
ಜಲಪಾತ, ಕರುಣಾ ಶ್ರಾವಣ, ಮಾನಸ ಸರೋವರ, ಮೊದಲು ಮಾನವನಾಗು, ಕಲ್ಲೋಲ ಮಾಲೆ, ಚರಗ, ಹಾಲೊನೆ, ಮರುಳ ಸಿದ್ದನ ಕಂತೆ, ಆಯ್ದ ಕವನಗಳು ಎಂಬ ಕವನ ಸಂಕಲನಗಳು ಪ್ರಕಟವಾಗಿವೆ.
ಕಲಬುರಗಿಯ ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನದಿಂದ 2023 ರಲ್ಲಿ ಹೊರಬಂದ ಈ ವಾಚಿಕೆಯ ಕೃತಿಯು 200 ಪುಟಗಳನ್ನು ಹೊಂದಿದ್ದು 200 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ.