ತಾಲೂಕ ಆಸ್ಪತ್ರೆಯಲ್ಲಿ ಸ್ವಯಂ ರಕ್ತದಾನ ಶಿಬಿರ ನಾಳೆ

ತಾಲೂಕ ಆಸ್ಪತ್ರೆಯಲ್ಲಿ ಸ್ವಯಂ ರಕ್ತದಾನ ಶಿಬಿರ ನಾಳೆ

ತಾಲೂಕ ಆಸ್ಪತ್ರೆಯಲ್ಲಿ ಸ್ವಯಂ ರಕ್ತದಾನ ಶಿಬಿರ ನಾಳೆ 

ಚಿಂಚೋಳಿ : ಇದೇ ನ. 25 ರಂದು ತಾಲೂಕ ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿದ್ದು ದಾನಿಗಳು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡುವಂತೆ ತಾಲೂಕ ಆರೋಗ್ಯ ಅಧಿಕಾರಿ ಡಾ. ದೀಪಕ್ ರಾಠೋಡ ಮನವಿ ಮಾಡಿದ್ದಾರೆ. 

ಪ್ರಕಟಣೆ ನೀಡಿರುವ ಅವರು ಸರಕಾರ ಪ್ರತಿ ವರ್ಷ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗುತ್ತದೆ. ಅದರಂತೆ ಈ ವರ್ಷವು ಕೂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮಾಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರ ಆದೇಶದ ಮೇರೆಗೆ ಶಿಬಿರ ನ 25 ರಂದು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಸ್ವಯಂ ಪ್ರೇರಿತ ರಕ್ತದಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ಮೂಲಕ ಅಧಿಕಾರಿ ಡಾ. ದೀಪಕ್ ರಾಠೋಡ್ ಕೋರಿದ್ದಾರೆ.