ಇ.ಎಲ್.ಸಿ. ಕ್ಲಬ್‌ನಿಂದ ಮತದಾರರ ಜಾಗೃತಿ ಕಾರ್ಯಕ್ರಮ ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಆಯೋಜನೆ

ಇ.ಎಲ್.ಸಿ. ಕ್ಲಬ್‌ನಿಂದ ಮತದಾರರ ಜಾಗೃತಿ ಕಾರ್ಯಕ್ರಮ  ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಆಯೋಜನೆ

ಇ.ಎಲ್.ಸಿ. ಕ್ಲಬ್‌ನಿಂದ ಮತದಾರರ ಜಾಗೃತಿ ಕಾರ್ಯಕ್ರಮ

ರಸಪ್ರಶ್ನೆ, ಪ್ರಬಂಧ ಸ್ಪರ್ಧೆ ಆಯೋಜನೆ

ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಮಹತ್ವವನ್ನು ಅರಿತುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಮೂಲಕ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಹೇಳಿದರು.

ಕಲಬುರಗಿ ದಕ್ಷಿಣ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಮತದಾರರ ಸಾಕ್ಷರತಾ ಆಂದೋಲನ ಯೋಜನೆಯಡಿ ಇ.ಎಲ್.ಸಿ. (ಎಲೆಕ್ಟೋರಲ್ ಲಿಟರಸಿ ಕ್ಲಬ್) ವತಿಯಿಂದ ಆಯೋಜಿಸಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ, ಮತದಾನದ ಮಹತ್ವ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ತಾಲ್ಲೂಕಿನ ಎಲ್ಲ ಪ್ರೌಢಶಾಲೆಗಳಲ್ಲಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ದಿನೇಶ ಥಂಬದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿಜಯ ವಿದ್ಯಾಲಯ ಪ್ರೌಢಶಾಲೆಯ ಅಜಯಕುಮಾರ ಅಧ್ಯಕ್ಷತೆ ವಹಿಸಿದ್ದರು. ಮೌನೇಶ್ವರ ವಿಶ್ವಕರ್ಮ, ರಾಮಚಂದ್ರಪ್ಪ, ಮಲ್ಲಿಕಾರ್ಜುನ ಭಜಂತ್ರಿ, ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ ಇ.ಎಲ್.ಸಿ. ಕ್ಲಬ್ ಸಂಯೋಜಕಿ ಗೀತಾ ಉಪಸ್ಥಿತರಿದ್ದರು.

ರಸಪ್ರಶ್ನೆ ಸ್ಪರ್ಧೆಯಲ್ಲಿ ಸೌಮ್ಯ ಮಂಜುನಾಥ ಪ್ರಥಮ, ವಿಜಯಲಕ್ಷ್ಮಿ ದ್ವಿತೀಯ ಹಾಗೂ ಫುರಕಾನ್ ತೃತೀಯ ಬಹುಮಾನ ಪಡೆದರು. ಪ್ರಬಂಧ ಸ್ಪರ್ಧೆಯಲ್ಲಿ ಕೃತಿಕಾ ಪ್ರಥಮ, ಶ್ರೇಯಾ ದ್ವಿತೀಯ ಹಾಗೂ ಮಲ್ಲಿಕಾರ್ಜುನ ತೃತೀಯ ಬಹುಮಾನ ಗಳಿಸಿದರು.

ವಿಜೇತ ವಿದ್ಯಾರ್ಥಿಗಳನ್ನು ಇ.ಎಲ್.ಸಿ. ಕ್ಲಬ್ ಸದಸ್ಯರು ಅಭಿನಂದಿಸಿದರು. ನಂತರ ಕಾರ್ಯಕ್ರಮ ಮುಕ್ತಾಯಗೊಂಡಿತು.

ದಿನೇಶ ಥಂಬದ,ಶಿಕ್ಷಣ ಸಂಯೋಜಕರು (ಇ.ಸಿ.ಒ.),ದಕ್ಷಿಣ ವಲಯ, ಕಲಬುರಗಿ.