ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಅಂಕಣಕಾರ್ತಿ, ಲೇಖಕಿ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ ಸಭಾಂಗಣದಲ್ಲಿ ಭಾನುವಾರ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕಾವ್ಯಸ್ಪಂದನ ಪಬ್ಲಿಕೇಷನ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಎಸ್. ನಾರಾಯಣ್ ಅವರು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ‘ಅನ್ವೇಷಣೆ ರಾಜ್ಯ ಪ್ರಶಸ್ತಿ’ ಪ್ರದಾನ ಮಾಡಿದರು.ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ಬರವಣಿಗೆ ಹಾಗೂ ಅಂಕಣಗಳ ಮೂಲಕ ಗುರುತಿಸಿಕೊಂಡಿರುವ ಮಾಧುರಿ ದೇಶಪಾಂಡೆ ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಕಾದಂಬರಿಕಾರ ಕೌಂಡಿನ್ಯ, ಲೇಖಕ ರಾಗಂ (ಡಾ. ರಾಜಶೇಖರ ಮಠಪತಿ), ಚಲನಚಿತ್ರ ಹಾಗೂ ಕಿರುತೆರೆ ನಟ ಸಂದೀಪ್ ನೀನಾಸಂ, ಹೊಳೆನರಸೀಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆರ್.ಬಿ. ಪುಟ್ಟೇಗೌಡ, ಲೇಖಕ ಕುಮಾರ್ ಭದ್ರಾವತಿ ಹಾಗೂ ‘ಭಾವಸಿಂಚನ’ ಕನ್ನಡ ಮಾಸಪತ್ರಿಕೆಯ ಪ್ರಧಾನ ಸಂಪಾದಕರು, ಲೇಖಕರು ಮತ್ತು ಪ್ರಕಾಶಕರಾದ ಭದ್ರಾವತಿ ರಾಮಾಚಾರಿ ಸೇರಿದಂತೆ ಹಲವು ಗಣ್ಯರು, ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.