ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎನ್.ಕೆ. ಅರ್ಜುನ

ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎನ್.ಕೆ. ಅರ್ಜುನ

ಸಂವಿಧಾನದ ಆಶಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಎನ್.ಕೆ. ಅರ್ಜುನ

ಕಲಬುರಗಿ: ಭಾರತೀಯ ಸಂವಿಧಾನ ದಿನದ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಎನ್.ಕೆ. ಅರ್ಜುನ ಅವರು ಪುಷ್ಪಮಾಲೆ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು ಕೇವಲ ಕಾನೂನುಗಳ ಪುಸ್ತಕವಲ್ಲ. ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಸ್ವಾತಂತ್ರ್ಯ, ಸಮಾನತೆ ಮತ್ತು ಸ್ವಾಭಿಮಾನದ ರಕ್ಷಾಕವಚವಾಗಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆ ಹಾಗೂ ಸಮಾನತೆಯ ಸಂದೇಶವನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ನಮ್ಮ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು. ಜಾತಿ, ಧರ್ಮ ಮತ್ತು ಭಾಷೆಯ ಭೇದಭಾವವಿಲ್ಲದೆ ಸಹೋದರತ್ವ ಹಾಗೂ ಸಮಾನತೆಯ ತತ್ವಗಳ ಆಧಾರದಲ್ಲಿ ಎಲ್ಲರೂ ಬದುಕಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಜಿಲ್ಲಾಧ್ಯಕ್ಷ ಬುದ್ದೇಶ ಸಿಂಗೆ, ಜಿಲ್ಲಾ ಉಪಾಧ್ಯಕ್ಷ ಶಿವರುದ್ರ ಕಟ್ಟಿಮನಿ ಉಪಸ್ಥಿತರಿದ್ದರು