ಸಂವಿಧಾನದ ಆಶಯಗಳನ್ನು ಯುವಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕರೆ

ಸಂವಿಧಾನದ ಆಶಯಗಳನ್ನು ಯುವಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕರೆ

ಸಂವಿಧಾನದ ಆಶಯಗಳನ್ನು ಯುವಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕರೆ

ಕಲಬುರಗಿ: ಸಂವಿಧಾನ ದಿನದ ಅಂಗವಾಗಿ ಭೀಮ್ ಆರ್ಮಿ ಯುತ್ ಫೆಡರೇಷನ್ ಕರ್ನಾಟಕ ವತಿಯಿಂದ ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗುರುವಾರ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ಯುತ್ ಫೆಡರೇಷನ್ ಕರ್ನಾಟಕದ ರಾಜ್ಯಾಧ್ಯಕ್ಷ ಎಸ್.ಎಸ್. ತವಡೆ ಮಾತನಾಡಿ ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಭ್ರಾತೃತ್ವ ಹಾಗೂ ಮಾನವ ಹಕ್ಕುಗಳನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವ, ಚಿಂತನೆ ಹಾಗೂ ಆದರ್ಶಗಳನ್ನು ಯುವಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ, ಧರ್ಮ, ಭಾಷೆ ಮತ್ತು ವರ್ಗ ಭೇದಗಳನ್ನು ಮೀರಿ ಸಮಾಜದಲ್ಲಿ ಸಮಾನತೆ ಹಾಗೂ ಸಹೋದರತ್ವ ಬೆಳೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ದೇವರಾಜ್ ಆರ್. ಕನ್ನಡಗಿ, ನಜೀರ್ ಮುತವಲ್ಲ, ಲೋಬೊ ಟ್ಯಾನಿ, ಸೂರ್ಯಕುಮಾರ್, ಕಾರ್ಟೂನ್ ಕಾಜಿ, ರಿವಾಲ್, ಊರ್ ರೆಹಮಾನ್ ಸಿದ್ದಿಕಿ, ಸಂತೋಷ್ ಬಾಪು, ಫಾದರ್ ರಾಮಲಿಂಗ ಧೋಳೆ, ತಿಪ್ಪಣ್ಣ ಬಿರಾದರ್, ಮೈನಾರಿಟಿ ಭೀಮ್ ಆರ್ಮಿಯ ಜಿಲ್ಲಾಧ್ಯಕ್ಷ ಉಮರ್ ಖಾನ್ ಸೇರಿದಂತೆ ವಿವಿಧ ಕ್ಷೇತ್ರಗಳ ಮುಖಂಡರು, ಯುವಕರು ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾಗವಹಿಸಿದ ಎಲ್ಲರಿಗೂ ಸಂಘಟನೆಯ ವತಿಯಿಂದ ಧನ್ಯವಾದ ಸಲ್ಲಿಸಲಾಯಿತು.