ನ.28ರಂದು ಸಂಗೀತ ಕಲಾ ಸಂಭ್ರಮ ಹಾಗೂ ‘ಗಿರಿಶಿರಿ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ
ನ.28ರಂದು ಸಂಗೀತ ಕಲಾ ಸಂಭ್ರಮ ಹಾಗೂ ‘ಗಿರಿಶಿರಿ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ :..
ಶಹಾಬಾದ : - ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ (ರಿ) ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ಅಂಗವಾಗಿ 2026ನೇ ಸಾಲಿನ ಸಂಗೀತ ಕಲಾ ಸಂಭ್ರಮ ಹಾಗೂ ‘ಗಿರಿಸಿರಿ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನವೆಂಬರ್ 28ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಜಗದಂಬಾ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಮರಲಿಂಗ ಯಾದಗಿರ ರವರು ತಿಳಿಸಿದರು.
ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಮಾರಂಭವು ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಜರುಗಲಿದ್ದು, ಪತ್ರಕರ್ತರಾದ ಲೋಹಿತ್ ಡಿ. ಕಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಬಸವರಾಜ ಮತ್ತಿಮೂಡ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಸ್ವಾಗತ ಷಮಿತಿ ಅಧ್ಯಕ್ಷ ನಿಂಗಪ್ಪ ಹುಳಗೋಳಕರ, ಪ್ರಾಚಾರ್ಯ ಬಾಲರಾಜ ಮಾಚನೂರ, ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ. ಹೆಚ್. ನಿರಗುಡಿ, ದಸಂಸ ರಾಜ್ಯ ಸಂ.ಸಂಚಾಲಕರಾದ ಮರಿಯಪ್ಪ ಹಳ್ಳಿ, ಸುರೇಶ ಮೆಂಗನ ಪತ್ರಕರ್ತರಾದ ವಾಸುದೇವ ಚವ್ಹಾಣ, ರಮೇಶ ಭಟ್, ಜಗದೇವ ದಿಗ್ಗಾಂವಕರ ಮತ್ತು ಶರಣು ಪಗಲಾಪುರ, ಶ್ರೀಮತಿ ಶಕುಂತಳಾ ಸಾಕರೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು ಹಾಗೂ ಕಲಾವಿದರು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಸಾಹಿತ್ಯ, ಸಂಗೀತ, ಕಲೆ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 15 ಸಾಧಕರಿಗೆ ‘ಗಿರಿಸಿರಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಈ ಸಮಾರಂಭದಲ್ಲಿ ಕನ್ನಡಾಭಿಮಾನಿಗಳು, ಸಾಹಿತಿಗಳು, ಕಲಾವಿದರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ಪದಾಧಿಕಾರಿಗಳು ಕೋರಿದ್ದಾರೆ.
ಈ ಸಂದರ್ಭದಲ್ಲಿ ಗಿರಿಸಿರಿ ಕಲಾ ಸಂಸ್ಥೆಯ ತಾಲ್ಲೂಕ ಅಧ್ಯಕ್ಷ ಅನಿಲ ಮೈನಾಳಕರ, ಶಿವಲಿಂಗಪ್ಪ ಹೆಬ್ಬಾಳ್ಕರ ಇದ್ದರು.

