ರಾಜ್ಯ ಮಟ್ಟದ ಕಾಯಕ ಗುರುರತ್ನ ಪ್ರಶಸ್ತಿಗೆ ಸೇಡಂನ ನಿರ್ಮಲಾ ದೇಸಾಯಿ, ಮುರಗೆಪ್ಪ ಹಣಮನಹಳ್ಳಿ ಆಯ್ಕೆ
ರಾಜ್ಯ ಮಟ್ಟದ ಕಾಯಕ ಗುರುರತ್ನ ಪ್ರಶಸ್ತಿಗೆ ಸೇಡಂನ ನಿರ್ಮಲಾ ದೇಸಾಯಿ, ಮುರಗೆಪ್ಪ ಹಣಮನಹಳ್ಳಿ ಆಯ್ಕೆ
ಕಲಬುರಗಿ: ಕರ್ನಾಟಕ ರಾಜ್ಯ ಶಿಕ್ಷಕರ ಸಂಘಗಳ ಪರಿಷತ್ತು (ರಿ), ಧಾರವಾಡ ವತಿಯಿಂದ ವಿಶ್ವ ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ ಕಾಯಕ ಗುರುರತ್ನ ಪ್ರಶಸ್ತಿಗೆ ಸೇಡಂ ತಾಲೂಕಿನ ತುರನೂರ ಗ್ರಾಮದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ತುರನೂರ ಗ್ರಾಮದ ಅಂಗನವಾಡಿ ಕೇಂದ್ರದ ಶಿಕ್ಷಕಿ ಶ್ರೀಮತಿ ನಿರ್ಮಲಾ ಎನ್. ದೇಸಾಯಿ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಶ್ರೀ ಮುರಗೆಪ್ಪ ಆರ್.ಎಚ್. ಹಣಮನಹಳ್ಳಿ ಅವರು ತಮ್ಮ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ, ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆ ಹಾಗೂ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಪರಿಗಣಿಸಿ ಇವರನ್ನು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವೆಂಬರ್ 29, 2026ರ ಭಾನುವಾರದಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಾಧ್ಯಕ್ಷ ಸಂಗಮೇಶ ಖನ್ನಿನಾಯಕರ ತಿಳಿಸಿದ್ದಾರೆ.
ಸೇಡಂ ತಾಲೂಕಿನ ಇಬ್ಬರು ಶಿಕ್ಷಕರು ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿರುವುದು ಸ್ಥಳೀಯ ಶಿಕ್ಷಣ ವಲಯದಲ್ಲಿ ಸಂತಸ ಮತ್ತು ಹೆಮ್ಮೆಗೆ ಕಾರಣವಾಗಿದೆ.

