ಗಂವ್ಹಾರ ಗ್ರಾಮ ಪಂಚಾಯಿತಿ ಅವ್ಯವಹಾರ ತನಿಖೆ ಆಗ್ರಹ ಅಮೃತ ಪಾಟೀಲ

ಗಂವ್ಹಾರ ಗ್ರಾಮ ಪಂಚಾಯಿತಿ ಅವ್ಯವಹಾರ ತನಿಖೆ ಆಗ್ರಹ ಅಮೃತ ಪಾಟೀಲ 

ಕಲಬುರಗಿ: 'ಜೇವರ್ಗಿ ತಾಲ್ಲೂಕಿನ ಗಂವ್ಹಾರ ಗ್ರಾಮ ಪಂಚಾಯಿತಿಯಲ್ಲಿ ಆದ ಅವ್ಯವಹಾರವನ್ನು ತನಿಖೆ ಮಾಡಬೇಕು ಹಾಗೂ ಪಿಡಿಒ ಹಾಗೂ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೆ.23ರಂದು ಬೆಳಿಗ್ಗೆ 11 ಗಂಟೆಗೆ ನಗರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊ- ಳ್ಳಲಾಗಿದೆ' ಎಂದು ವೀರ ಕನ್ನಡಿಗರ

ಸೇನೆ ರಾಜ್ಯ ಘಟಕದ ಅಧ್ಯಕ್ಷ ಅಮೃತ ಪಾಟೀಲ ಸಿರನೂರ ಹಾಗೂ ಕರ್ನಾಟಕ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಹೇಳಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,'15ನೇ ಹಣಕಾಸು ಯೋಜನೆಯ ಅನುದಾನದಲ್ಲಿ ಸುಮಾರು ₹18 ಲಕ್ಷ ಅನುದಾನ ದುರ್ಬಳಕೆಯಾಗಿದೆ. ಸಮಗ್ರ ತನಿಖೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ

ಹಾಗೂ ಪ್ರಾದೇಶಿಕ ಆಯುಕ್ತರು ಹಾಗೂ ಹಣ ಜಿಲ್ಲಾ ಉಸ್ತುವಾರಿ ಸಚಿವರಿಗೂ ಪತ್ರ ಬರೆದು ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ' ಎಂದು ದೂರಿದರು. “ಸೆ.17ರಂದು ನಡೆಯುವ

ಸಂಪುಟ ಸಭೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಲಾಗುವುದು' ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಂ .ಬಿ.ಪಾಟೀಲ,ಶಿವಾನಂದ ಚಿಕ್ಕಾಣಿ,ಅಣವೀರ ಬಿರಾದಾರ ಹಾಜರಿದ್ದರು

ವರದಿ ಜೆಟ್ಟಪ್ಪ ಎಸ್ ಪೂಜಾರಿ