ಕಲಬುರಗಿ | ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ
ಕಲಬುರಗಿ | ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ
ಕಲಬುರಗಿ: ನಗರದ ಸರ್ದಾರ್ ವಲ್ಲಬಾಯಿ ಪಟೇಲ್ ವೃತ್ತದಲ್ಲಿ ಎಸ್.ಸಿ/ಎಸ್.ಟಿ ಸಮುದಾಯದ ಮೀಸಲಾತಿ ರದ್ದತಿ ಮಾಡುವ ಕುರಿತು ಹೇಳಿಕೆ ಕೊಟ್ಟ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಗ್ರಾಮಿಣ ಅಧ್ಯಕ್ಷ ಶಿವರಾಜ ಪಾಟೀಲ, ಮಾಜಿ ಶಾಸಕ ಪಿ ರಾಜೀವ್ ಸೇರಿದಂತೆ ಪಕ್ಷದ ಎಲ್ಲಾ ತರದ ಚುನಾಯಿತ ಪ್ರತಿನಿಧಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ, ಮಂಡಲ, ಮೋರ್ಚಾಗಳ, ಪದಾಧಿಕಾರಿಗಳು, ಪ್ರಕೋಷ್ಠಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಇದ್ದರು.