ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ- ಕೈಗಾರಿಕಾ ನೀತಿ ಜಾರಿಗೆ ತರಲು ಬದ್ದ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ- ಕೈಗಾರಿಕಾ ನೀತಿ ಜಾರಿಗೆ ತರಲು ಬದ್ದ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ- ಕೈಗಾರಿಕಾ ನೀತಿ ಜಾರಿಗೆ ತರಲು ಬದ್ದ: ಸಿಎಂ ಸಿದ್ದರಾಮಯ್ಯ 

ಕಲಬುರಗಿ :16ನೇ ಸೆಪ್ಟೆಂಬರ್, 10 ವರ್ಷಗಳ ನಂತರ ಸೆ. 17 ರಂದು ಕಲಬುರಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಪ್ರಮುಖ ಕಾರ್ಯಗಳಿಗೆ ಆದ್ಯತೆ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಸೋಮವಾರ (ಸೆ.16) ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಕ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪ್ರಮುಖವಾಗಿ ಕಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಹಾಗೂ ಪ್ರತ್ಯೇಕ ಕೈಗಾರಿಕಾ ನೀತಿ ಜಾರಿ ಜತೆಗೆ ಕಕ ಭಾಗದ ಖಾಲಿ ಹುದ್ದೆಗಳ ಭರ್ತಿಗೆ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.