ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಸಂತಾಪ

ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಡಾ ಅಂಬಾರಾಯ ಅಷ್ಠಗಿ ಸಂತಾಪ
ಕಲಬುರಗಿ : ಯಾದಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಹಿರಿಯ ಬಿಜೆಪಿ ಮುಖಂಡರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರ ನಿಧನಕ್ಕೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರು ಮತ್ತು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಹಿರಿಯ ರಾಜಕಾರಣಿಗಳಾದ ಮುದ್ನಾಳ್ ಅವರು, ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟೀಯ ಉಪಾಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ್ದಾರೆ.
ಯಾದಗಿರಿ ಶಾಸಕರಾಗಿ, ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕವಾಗಿ ಯಾದಗಿರಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಿದ್ದರು ಎಂದು ಡಾ ಅಷ್ಠಗಿ ತಿಳಿಸಿದ್ದಾರೆ.
ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.