ಮಾಜಿ ಸಚಿವ ಮುನಿರತ್ನ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿ
ಮಾಜಿ ಸಚಿವ ಮುನಿರತ್ನ ಪರಪ್ಪನ ಅಗ್ರಹಾರದಲ್ಲಿ ಸಾಮಾನ್ಯ ಕೈದಿ
ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ವಿಚಾರಣಾಧೀನ ಕೈದಿ ನಂ.9141 ಆಗಿದ್ದು, ಪರಪ್ಪನ ಅಗ್ರಹಾರದ ಕೇಂದ್ರ ಕಾರಾ ಗೃಹದಲ್ಲಿ ಸಾಮಾನ್ಯ ಕೈದಿಯಾಗಿ ಕಾಲ ಕಳೆಯುತ್ತಿದ್ದಾರೆ.
ಇನ್ನೊಂದೆಡೆ ಜಾತಿ ನಿಂದನೆ ಪ್ರಕರಣದಲ್ಲಿ ಬುಧವಾರ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಮುನಿರತ್ನ ಅವರಿಗೆ ನಿರಾಸೆಯಾಗಿದ್ದು, ಗುರುವಾರಕ್ಕೆ ಮುಂದೂಡಿಕೆ ಆಗಿದೆ.
ತ್ಯಾಜ್ಯ ವಿಲೇವಾರಿ ಗುತ್ತಿಗೆ ಸಂಬಂಧ 30 ಲಕ್ಷ ರೂ. ಕಮಿಷನ್ ನೀಡುವಂತೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜುಗೆ ನಿಂದಿಸಿ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ಮುನಿರತ್ನ ವಿರುದ್ಧ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಇಂದು ಜಾಮೀನು ಸಿಗುತ್ತಾ? ಇಲ್ವಾ?
ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರಕ್ಕೆ ಕಾಯ್ದಿರಿಸಿದೆ. ಬುಧವಾರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಲಿದ್ದೂ, ಮುನಿರತ್ನ ಅವರ ಭವಿಷ್ಯದ ಜೈಲುವಾಸದ ಬಗ್ಗೆ ನಿರ್ಧಾರವಾಗಲಿದೆ.