ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಪ್ರೊ ಯಶವಂತರಾಯ ಅಷ್ಠಗಿ ಸಂತಾಪ

ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಪ್ರೊ ಯಶವಂತರಾಯ ಅಷ್ಠಗಿ ಸಂತಾಪ

ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಪ್ರೊ ಯಶವಂತರಾಯ ಅಷ್ಠಗಿ ಸಂತಾಪ 

ಕಲಬುರಗಿ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನಕ್ಕೆ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಇಂಜಿನಿಯರಿಂಗ್ ಪದವಿಧರ ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷರಾದ ಪ್ರೊ ಯಶವಂತರಾಯ ಅಷ್ಠಗಿ ಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಯಾವುದೇ ಒತ್ತಡ, ಆಸೆ ಮತ್ತು ಆಮಿಷಗಳಿಗೆ ಒಳಗಾಗದೆ ನಿರ್ಭೀತಿಯಿಂದ ರಾಷ್ಟ್ರ ನಿರ್ಮಾಣಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ್ದ ಗಟ್ಟಿ ಧ್ವನಿಯೊಂದನ್ನುಕಳೆದುಕೊಂಡಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಕುಟುಂಬ ವರ್ಗಕ್ಕೆ ಮತ್ತು ಗುತ್ತಿಗೆದಾರರ ಸಂಘಕ್ಕೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಇಂಜಿನಿಯರಿಂಗ್ ಸ್ನಾತಕೋತ್ತರ ಪದವಿಧರರು ಆಗಿರುವ ಪ್ರೊ ಯಶವಂತರಾಯ ಅಷ್ಠಗಿ ಸಂತಾಪ ವ್ಯಕ್ತಪಡಿಸಿದ್ದಾರೆ.